ಪ್ರಧಾನಿ ಮೋದಿ ಇಂದಿನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಾಥ್ ಕೊಡಲ್ಲ!
ಅದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯಗೆ ತಡವಾಗಿ ಆಹ್ವಾನ ಬಂದಿರುವುದಂತೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ‘ಈ ಕಾರ್ಯಕ್ರಮಕ್ಕೆ ರೈಲ್ವೇ ಅಧಿಕಾರಿಗಳು ತಡವಾಗಿ ಆಹ್ವಾನ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಯ ಅರ್ಧದಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಜತೆಗೆ ಉಚಿತ ಭೂಮಿ ನೀಡುತ್ತಿದೆ. ಹೀಗಿದ್ದೂ ನಮಗೆ ಸರಿಯಾದ ಸಮಯಕ್ಕೆ ಆಹ್ವಾನ ಸಿಕ್ಕಿಲ್ಲ. ನನಗೆ ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಸರ್ಕಾರದ ಪರ ಆರ್ ವಿ ದೇಶಪಾಂಡೆ ಭಾಗವಹಿಸಲಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.