ತಪ್ಪಿತಸ್ಥರ ವಿರುದ್ಧ ಕ್ರಮ: ಎಬಿವಿಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬುಧವಾರ, 17 ಆಗಸ್ಟ್ 2016 (16:32 IST)
ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಹೀಗಿರುವಾಗ ಎಬಿವಿಪಿ ಪ್ರತಿಭಟನೆ ನಡೆಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಆಮ್ನೆಸ್ಟಿ ಇಂಡಿಯಾ ಎಂಬ ಸರ್ಕಾರೇತರ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್ ಹೆಸರಿನಲ್ಲಿ ನಡೆಸಿದ ಕಾರ್ಯಾಗಾರದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
 
ಇದೆ ವೇಳೆ, ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಕೇಂದ್ರ ಗೃಹ ಸಚಿವರಿಗೆ ದೂರು ನೀಡಿರುವ ಕುರಿತು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಾಕರಿಸಿದ್ದಾರೆ.
 
ಅಧಿಕಾರಿಗಳ ವಿರುದ್ಧ ಸಿಎಂ ಗರಂ....
 
ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಹಾಗೂ ಸಮರ್ಪಕವಾಗಿ ಅನುದಾನ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ