ಕಾಂಗ್ರೆಸ್ ಶಾಸಕನ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಸೋಮವಾರ, 30 ಮೇ 2016 (15:27 IST)
ರಾಜಕೀಯ ಅಂದ್ರೆ ಏನೆಂದು ತಿಳಿದಿದ್ದೀರಾ ಎಂದು ಮೊಹಿನುದ್ದೀನ್ ಅನ್ವರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
 
ಮೊಹಿನುದ್ದೀನ್ ಅನ್ವರ್ ಅವರ ಸಹೋದರ ಬಿ.ಎ.ಫಾರೂಖ್ ಜೆಡಿಎಸ್ ಪಕ್ಷದಿಂದ ರಾಜ್ಯಸಭೆಗೆ ಸ್ಪರ್ಧಿಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿನ್ನ ಸಹೋದರನನ್ನು ಬೇರೆ ಪಕ್ಷದಿಂದ ಹೇಗೆ ಕಣಕ್ಕಿಳಿಸುತ್ತಿದ್ದೀಯಾ, ಶಾಸಕರಾಗಿ ಅಧಿಕಾರ ಪಡೆಯಲು ಕಾಂಗ್ರೆಸ್ ಪಕ್ಷ ಬೇಕು, ಬಿಸಿನೆಸ್ ಮಾಡಲು ಕಾಂಗ್ರೆಸ್ ಪಕ್ಷ ಬೇಕು. ಆದರೆ,  ನಿಮ್ಮ ಕುಟುಂಬಕ್ಕೆ ಪಕ್ಷದ ಕುರಿತು ಸ್ವಲ್ಪವು ನಿಷ್ಠೆಯಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮೊಹಿನುದ್ದೀನ್ ಅನ್ವರ್ ಅವರನ್ನು ತರಾಟೆಗೆ ತೆಗೆದುಕೊಂಡರು.
 
ನಿನ್ನ ಅನುಮತಿ ಇಲ್ಲದೆ, ನಿನ್ನ ಸಹೋದರ ರಾಜ್ಯಸಭೆಗೆ ಸ್ಪರ್ಧಿಸಲು ಹೇಗೆ ಸಾಧ್ಯ. ನಿನ್ನ ಸಹೋದರನಿಗೆ ರಾಜ್ಯಸಭೆ ಟಿಕೆಟ್ ಬೆಕಿದ್ರೆ ನನ್ನ ಕೇಳಬೇಕಿತ್ತು. ಅದನ್ನು ಬಿಟ್ಟು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿ ಪಕ್ಷದ ವಿರುದ್ಧ ಕುತಂತ್ರ ನಡೆಸುತ್ತಿದ್ದೀರಾ ಎಂದು ಪ್ರಶ್ನಿಸಿದರು.
 
ನಿಮ್ಮ ಸಹೋದರ ಬಿ.ಎ.ಫಾರೂಖ್ ಜೆಡಿಎಸ್ ಪಕ್ಷದಿಂದ ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತಿರುವುದು ಅಸ್ಕರ್ ಫರ್ನಾಂಡಿಸ್ ಅವರಿಗೆ ಬೇಸರ ತಂದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಲ್ಲೂ ಬೇಸರ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ತಮಗೆ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಮಾಡಿಕೊಡದೇ ಇರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ