ಸಿಎಂ ಸಿದ್ದರಾಮಯ್ಯ ಡೈರಿ ಪ್ರಕರಣಗಳನ್ನು ಸಿಬಿಐಗೆ ವಹಿಸಲಿ: ಯಡಿಯೂರಪ್ಪ

ಮಂಗಳವಾರ, 28 ಫೆಬ್ರವರಿ 2017 (13:06 IST)
ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ರೆ ಡೈರಿ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ. 
 
ಡೈರಿ ಬಿಡುಗಡೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೂರು ದಿನಗಳವರೆಗೆ ಮೌನವಾಗಿದ್ದರು. ಮೂರು ದಿನಗಳ ನಂತರ ನನ್ನ ವಿರುದ್ಧ ನಕಲಿ ಡೈರಿ ಬಿಡುಗಡೆ ಮಾಡಿದರು ಎಂದು ಲೇವಡಿ ಮಾಡಿದರು.
 
ಸಿಎಂ ಸಿದ್ದರಾಮಯ್ಯರಿಗೆ ನೋಡಿದರೆ ಕರಣೆ ಬರುತ್ತದೆ. ಅವರ ವರ್ತನೆಯಿಂದ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ಅಸಮಾಧಾನಗೊಂಡಿದ್ದು, ಬಿಜೆಪಿ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದರು.
 
ಕುಮಾರ ಬಂಗಾರಪ್ಪ, ಪರಿಮಳ ನಾಗಪ್ಪ ಸೇರಿದಂತೆ ಅನೇಕ ಮುಖಂಡರು ಮಾರ್ಚ್ 16 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ