ಬರ ಪರಿಸ್ಥಿತಿ ನಿಭಾಯಿಸಲು ಸರಕಾರ ವಿಫಲ: ಶೆಟ್ಟರ್ ಆಕ್ರೋಶ

ಗುರುವಾರ, 29 ಡಿಸೆಂಬರ್ 2016 (18:05 IST)
ಬರಪೀಡಿತ ತಾಲೂಕು ಘೋಷಿಸಿದ ಮೇಲೆ ಎಷ್ಟು ಹಣ ಖರ್ಚು ಮಾಡಿದೆ ಎಂಬುವುದರ ಕುರಿತು ರಾಜ್ಯ ಸರಕಾರ ಶ್ವೇತ ಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. 
 
ಹಾವೇರಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಅವರು, ರಾಜ್ಯ ಸರಕಾರ ಬಿಡುಗಡೆ ಮಾಡಿದ ಹಣವನ್ನು ಅಧಿಕಾರಿಗಳು ಖರ್ಚು ಮಾಡಿಲ್ಲ. ಬರಪರಿಸ್ಥಿತಿ ನಿಭಾಯಿಸಲು ಎಷ್ಟು ಹಣ ಖರ್ಚು ಮಾಡಿದ್ದೀರಿ ಅಂತಾ ಅಧಿಕಾರಿಗಳನ್ನು ಕೇಳಿದರೆ ಯಾರ ಬಳಿಯೂ ಸ್ಪಷ್ಟ ಉತ್ತರವೇ ಸಿಗುತ್ತಿಲ್ಲ ಎಂದು ಕಿಡಿಕಾರಿದರು.
 
ಬರ ಪರಿಸ್ಥಿತಿ ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ನಿಭಾಯಿಸಲು ಸಚಿವ ಎಚ್.ಕೆ.ಪಾಟೀಲ್ ವಿಫಲರಾಗಿದ್ದಾರೆ. ಎನ್‌ಆರ್‌ಜಿ ಯೋಜನೆ ಕಾರ್ಮಿಕರಿಗೆ ತಲುಪಿಲ್ಲ. ಅಲ್ಲದೆ ಜನರಿಗೆ ಕೆಲಸ ಸಿಗದೆ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
 
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಜನರಿಗೆ ಕೂಲಿ ಹಣ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ ಜಗದೀಶ್ ಶೆಟ್ಟರ್, ಎಷ್ಟು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದೀರಿ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್‌ರಿಗೆ ಸವಾಲ್ ಎಸೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ