ಕೆ.ಜೆ. ಜಾರ್ಜ್ ನಂತ್ರ ಸಚಿವ ರೈ ಪುತ್ರನ ಗುಂಡಾಗಿರಿ: ಸರ್ಕಾರದ ವಿರುದ್ಧ ಶೆಟ್ಟರ್ ವಾಗ್ದಾಳಿ

ಸೋಮವಾರ, 25 ಜುಲೈ 2016 (15:32 IST)
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಪ್ರಕರಣ ಜೀವಂತವಾಗಿರುವ ಬೆನ್ನಲ್ಲೇ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ರಮನಾಥ ರೈ ಅವರ ಪುತ್ರನ ಪುಂಡಾಟಿಕೆ ಬೆಳಕಿಗೆ ಬಂದಿದೆ. ರಾಜ್ಯ ಸರಕಾರ ಧಮ್ಕಿ ಸರಕಾರ, ಮಂತ್ರಿಗಳು ಮತ್ತು ಅವರ ಮಕ್ಕಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ  ವಾಗ್ದಾಳಿ ನಡೆಸಿದರು.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಹೊಣೆಗೆಡಿತನವೇ ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣ. ರಾಜ್ಯಾದ್ಯಂತ ಬಸ್‌ ಬಂದ್ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ನ್ಯಾಯಯುತವಾಗಿದೆ. ರಾಜ್ಯ ಸರಕಾರ ಸಾರಿಗೆ ಸಂಸ್ಥೆ ನೌಕರ ಬೇಡಿಕೆಯನ್ನು ಈಡೇರಿಸಲಿ ಎಂದು ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ