ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ!

ಗುರುವಾರ, 22 ಸೆಪ್ಟಂಬರ್ 2016 (10:49 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿರುವ ಹಿನ್ನೆಲೆಯಲ್ಲಿ ಶನಿವಾರ ಕರೆಯಲಾಗಿರುವ ವಿಶೇಷ ಅಧಿವೇಶನಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರನ್ನು ಭೇಟಿಯಾದರು.
 
ಒಂದು ದಿನದ ವಿಶೇಷ ಅಧಿವೇಶನ ನಡೆಸಲು ರಾಜ್ಯಪಾಲ ವಜೂಬಾಯಿ ವಾಲಾ ಅವರು ಸಮ್ಮತ್ತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
 
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಸಚಿವರಾದ ಮಹದೇವ ಪ್ರಸಾದ ಹಾಗೂ ಮಹದೇವಪ್ಪ ಸಾಥ್ ನೀಡಿದರು.
 
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿ ಪರಿಷತ್ ಸಭೆ ನಡೆಯಿತು. ಕಾವೇರಿ ವಿಚಾರದಲ್ಲಿ ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಒಂದು ದಿನ ವಿಧಾನ ಮಂಡಲ ಅಧಿವೇಶನ ಕರೆಯಲು ನಿರ್ಧಾರ ಕೈಗೊಳ್ಳಲಾಗಿತ್ತು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ