ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆ ತಿರುಕ ಮನುಷ್ಯ: ಬಿ.ಎಸ್‌.ಯಡಿಯೂರಪ್ಪ

ಸೋಮವಾರ, 23 ಮೇ 2016 (12:48 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆ ತಿರುಕ ಮನುಷ್ಯ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಟುವಾಗಿ ಟೀಕೆ ಮಾಡಿದ್ದಾರೆ.
 
ಕುಂದಾ ನಗರಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆ ತಿರುಕ ವ್ಯಕ್ತಿ, ವಾಸ್ತವ ವಿಷಯಗಳು ತಿಳಿದಿದ್ದರು ಸಹ ತಲೆ ತಿರುಕನಂತೆ ಮಾತನಾಡುತ್ತಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ ಜೈಲಿಗೆ ಕಳುಹಿಸಿದ್ದರು. ಈ ಕುರಿತು ನ್ಯಾಯಾಲಯದಲ್ಲಿ ಸಾಭೀತಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ವಿಫಲರಾಗಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ. 2018 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿ.ಎಸ್‌.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ