ಡೈರಿ ವಿವಾದ: ಸಿಎಂ ಸಿದ್ದರಾಮಯ್ಯರೊಂದಿಗೆ ಜಿ.ಪರಮೇಶ್ವರ್ ಚರ್ಚೆ

ಶನಿವಾರ, 25 ಫೆಬ್ರವರಿ 2017 (17:12 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ "ಕಾವೇರಿ"ಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರನ್ನು ಸುಮಾರು 30 ನಿಮಿಷಗಳ ಕಾಲ ಕಾಯಿಸಿದ ಸಿಎಂ ಸಿದ್ದರಾಮಯ್ಯ ಕೊನೆಗೂ ಪರಮೇಶ್ವರ್ ಅವರ ಭೇಟಿಗೆ ಅವಕಾಶ ನೀಡಿದರು.  
 
ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದ ಡೈರಿ ವಿಚಾರ ಮತ್ತು ಸಮನ್ವಯ ಸಮಿತಿ ಸಭೆಯ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಾಳೆ ಸಮನ್ವಯ ಸಮಿತಿ ಸಭೆ ನಡೆಯಲಿರುವುದರಿಂದ ಸಭೆಯಲ್ಲಿ ನಾಲ್ಕು ವರ್ಷಗಳ ಕಾಲ ಸಚಿವರಾಗಿ ಸೇವೆ ಸಲ್ಲಿಸಿದವರನ್ನು ಪಕ್ಷದ ಸಂಘಟನೆಗಾಗಿ ಬಳಸಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
 
ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ನಾಳೆ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ಕೊಕ್ ನೀಡುವ ಸಚಿವರ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ