ಬರ ಪರಿಹಾರ ಕಾಮಗಾರಿಯನ್ನು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕೈಗೊಂಡಿದ್ದು, ಕುಡಿಯವ ನೀರು, ಜಾನುವಾರಗಳಿಗೆ ಮೇವು ಸೇರಿದಂತೆ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರಿಗೆ ವಿವರಣೆ ನೀಡಿದರು.