ಸಿಎಂ ಸಿದ್ದರಾಮಯ್ಯ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ: ಪೂಜಾರಿ

ಶನಿವಾರ, 24 ಸೆಪ್ಟಂಬರ್ 2016 (20:19 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ವಿಶೇಷ ವಿಧಾನ ಮಂಡಲ ಅಧಿವೇಶನದಲ್ಲಿ ತೀರ್ಮಾನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಭಂಡ ಧೈರ್ಯ ತೋರಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ. 
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ. ಅದರ ಬದಲು ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಬೇಕಾಗಿತ್ತು. ಆಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಧ್ಯ ಪ್ರವೇಶಿಸದೇ ಅನ್ಯಮಾರ್ಗವಿರುತ್ತಿರಲಿಲ್ಲ ಎಂದು ತಿಳಿಸಿದರು. 
 
ಕಾವೇರಿ ವಿಚಾರದಲ್ಲಿ ರಾಜಕೀಯ ಸಲಹೆಗಾರರು ಹಾಗೂ ಆಪ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸರಿಯಾದ ಮಾರ್ಗದರ್ಶನ ನೀಡಿಲ್ಲ. ಇಲ್ಲಿರುವ ನದಿ ನೀರಿನ ಲಭ್ಯತೆಯ ಅಂಕಿ ಅಂಶವನ್ನು ಕೋರ್ಟ್‌ಗೆ ನೀಡಬೇಕಿತ್ತು. ಈಗ ಕೊನೆ ಗಳಿಗೆಯಲ್ಲಿ ಕಾನೂನು ಹಿಡಿತದಿಂದ ತಪ್ಪಿಸಿಕೊಳ್ಳಲು ಸರಕಾರಕ್ಕೆ ಸಾಧ್ಯವಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ತಾವು ಮಾಡಿದ್ದೇ ಸರಿ ಎನ್ನುವಂತೆ ವರ್ತಿಸಿ ಅವರೇ ಸ್ವಯಂ ನ್ಯಾಯಾಂಗ ನಿಂದನೆಗೆ ಸಿಲುಕಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ