ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಕ್ಷಮೆ ಕೋರಲಿ: ಯಡಿಯೂರಪ್ಪ

ಗುರುವಾರ, 8 ಡಿಸೆಂಬರ್ 2016 (17:33 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಹೇಳಿದಾಗ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದೀಗ ಅಧಿಕಾರಿಗಳ ಮನೆಗಳಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿರುವುದರಿಂದ ಅವರು ಅಮಿತ್ ಶಾ ಕ್ಷಮೆ ಕೋರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಕೇಂದ್ರ ಸರಕಾರದಿಂದ ಹಣವನ್ನು ತರಲು ನಾವು ಸಿದ್ದರಿದ್ದೇವೆ. ಆದರೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಭ್ರಷ್ಟಾಚಾರವನ್ನು ಸಿಎಂ ಸಿದ್ದರಾಮಯ್ಯರಿಂದ ತಡೆಯಲು ಸಾಧ್ಯವೇ ಎಂದು ತಿರುಗೇಟು ನೀಡಿದರು.
 
ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ.  ಕಪಿಲ್ ಮೋಹನ್‌ರನ್ನು ಸರಕಾರ ರಕ್ಷಿಸುತ್ತಿದೆ. ಸಿಎಂ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
 
ಅಧಿಕಾರಿಗಳ ಬಳಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿದೆ. ಸರಕಾರದ ರಕ್ಷಣೆಯಿಲ್ಲದೇ ಭ್ರಷ್ಟರು ಇಂತಹ ಸಂಪಾದನೆ ಮಾಡಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ