ಮೂಲ ಕಾಂಗ್ರೆಸ್ಸಿಗರ ಕಡೆಗಣನೆಯೇ ಎಸ್.ಎಂ.ಕೃಷ್ಣ ರಾಜೀನಾಮೆಗೆ ಕಾರಣ: ಶ್ರೀನಿವಾಸ್ ಪ್ರಸಾದ್

ಭಾನುವಾರ, 29 ಜನವರಿ 2017 (11:29 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹಿರಿಯ ನಾಯಕರಿಗೆ ಗೌರವ ನೀಡುತ್ತಿಲ್ಲ. ಹೀಗಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬೇಸರ ವ್ಯಕ್ತಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮದೇ ಆದ ಬಟಾಲಿಯನ್‌ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ. ಸಿಎಂ ಹಿರಿಯ ಕಾಂಗ್ರೆಸ್ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ. ಇದು ಮೂಲ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ತಂದಿದೆ ಎಂದು ವಿಶ್ಲೇಷಿಸಿದರು. 
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಈ ಸಂಬಂಧ ಇಂದು ಬೆಳಿಗ್ಗೆ 12 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲಿರುವ ಎಸ್.ಎಂ.ಕೃಷ್ಣ, ತಮ್ಮ ರಾಜೀನಾಮೆಗೆ ಸ್ಪಷ್ಟ ಉತ್ತರ ನೀಡಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ