ಸಿಎಂ ಸಿದ್ದರಾಮಯ್ಯ ಆಪ್ತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

ಸೋಮವಾರ, 20 ಫೆಬ್ರವರಿ 2017 (14:47 IST)
ಶಿಕ್ಷಕಿಯೊಬ್ಬಳಿಗೆ ವರ್ಗಾವಣೆ ಮಾಡಿಸುವುದಾಗಿ ಬೆದರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ರಮೇಶ್  ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥ ಮಹಿಳೆಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ.
 
ಸಿಎಂ ಸಿದ್ದರಾಮಯ್ಯ ಆಪ್ತ ಪಿ.ರಮೇಶ್, ವರ್ಗಾವಣೆ ಬಯಸಿ ಬಂದ ಶಿಕ್ಷಕಿಯನ್ನು ಪ್ರತಿಷ್ಠಿತ ಹೋಟೆಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಪೊಲೀಸರಿಗೆ ದೂರು ನೀಡಿದ್ರೆ ಜೀವ ತೆಗೆಯುತ್ತೇನೆ. ಪೊಲೀಸರು ನನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
 
ಹಲಸೂರು ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಪಿ.ರಮೇಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಮಹಿಳಾ ಶಿಕ್ಷಕಿ ಆರೋಪಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ