ಏತನೀರಾವರಿ ಯೋಜನೆ: ಎಸ್.ಎಮ್. ಕೃಷ್ಣ ಪತ್ರಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
ಶನಿವಾರ, 21 ಮೇ 2016 (12:05 IST)
ಇಗ್ಗಲೂರು ಏತನೀರಾವರಿ ಯೋಜನೆ ಆರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಮ್. ಕೃಷ್ಣ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಬ್ಯಾರೆಜ್ ಹಿನ್ನಿರು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮಾಜಿ ಸಚಿವ ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
ಕೃಷ್ಣ ಅವರ ಪತ್ರಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿಯವರು, ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸುತ್ತೇವೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ ಬದಲಾವಣೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಸ್. ಎಮ್ ಕೃಷ್ಣ ಹೈಕಮಾಂಡ್‌ಗೆ ಮನವಿ ನೀಡಿ, ದೆಹಲಿಯಲ್ಲಿ ಬೀಡು ಬಿಟ್ಟಿದ್ದರು.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.