ಜುಲೈ 13 ರಂದು 39 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ರಾಕೇಶ್ ಸಿದ್ದರಾಮಯ್ಯ, ಸ್ನೇಹಿತರೊಂದಿಗೆ ಬೆಲ್ಜಿಯಂ ಪ್ರವಾಸ ಕೈಗೊಂಡಿದ್ದರು. ಬೆಲ್ಜಿಯಂ ಪ್ರವಾಸಕ್ಕೆ ತೆರಳುವ ಮುನ್ನವೆ ಯಕೃತ್ (ಲಿವರ್) ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರವಾಸದ ವೇಳೆ ಅವರ ಆರೋಗ್ಯ ಹದಗೆಟ್ಟಿತ್ತು. ಅವರನ್ನು ಬ್ರೂಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.