ಸಿಎಂ ನೇತೃತ್ವದಲ್ಲಿ ಸಭೆ: ನೀರು ಹರಿಸಬೇಕೋ ಬೇಡವೋ ಎನ್ನುವ ಚರ್ಚೆ ಆರಂಭ

ಮಂಗಳವಾರ, 13 ಸೆಪ್ಟಂಬರ್ 2016 (12:21 IST)
ರಾಜ್ಯಾದ್ಯಂತ ಕಾವೇರಿ ಹೋರಾಟ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಬೇಕೇ ಅಥವಾ ಬೇಡವೋ ಎನ್ನುವ ಬಗ್ಗೆ ಮಹತ್ವದ ಮಂತ್ರಿ ಪರಿಷತ್ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಕಾಗೋಡು ತಿಮ್ಮಪ್ಪ, ಎಂ.ಬಿ.ಪಾಟೀಲ್, ಟಿ.ಬಿ.ಜಯಚಂದ್ರ ಸೇರಿದಂತೆ ಇನ್ನಿತರ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಹಿರಿಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲಹೆಗಳನ್ನು ನೀಡಿದ್ದಾರೆ. 
 
ಸಿಎಂ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಕಾವೇರಿ ಕಣಿವೆಯಲ್ಲಿನ ಜಲಾಶಯಗಳ ಬಗ್ಗೆ ವಾಸ್ತವ ಅಂಶಗಳನ್ನು ಸುಪ್ರೀಂಕೋರ್ಟ್‌ಗೆ ರಾಜ್ಯದ ಪರ ವಕೀಲರಿಂದ ಮನವರಿಕೆ ಮಾಡಿಕೊಡಲಾಗಿತ್ತು. ಆದಾಗ್ಯೂ ಆದೇಶ ಮಾರ್ಪಾಡು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತು ಎಂದು ತಿಳಿಸಿದ್ದಾರೆ.
 
ಕಾವೇರಿ ವಿವಾದ ದಿನದಿಂದ ದಿನಕ್ಕೆ ಜಟೀಲವಾಗುತ್ತಾ ಸಾಗಿದ್ದು, ಕೂಡಲೇ ಅಂತ್ಯಹಾಡಬೇಕಾಗಿದೆ ಎಂದು ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ