ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಈ ಕುರಿತು ಚರ್ಚೆ ನಡೆಸಲು ನಿನ್ನೆ ಪ್ರಧಾನಿ ಭೇಟಿಗಾಗಿ ಸಮಯ ಕೇಳಿದ್ದೇವು. ಆದರೆ, ಪ್ರಧಾನಿ ಭೇಟಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ವರ್ತನೆ ಸರಿಯಲ್ಲ ಎಂದರು.
ಬಿಎಸ್‌ವೈ ಹಾಗೂ ಶೋಭಾಗೆ ಟಾಂಗ್....
ಒಕ್ಕೂಟ ವ್ಯವಸ್ಥೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲ. 14 ನೇಯ ಹಣಕಾಸು ಆಯೋಗದ ಪ್ರಕಾರ ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಹಣ ಬಿಡುಗಡೆ ಮಾಡಬೇಕು. ಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹ ಸ್ಥಿತಿ ಎದುರಾಗಿತ್ತು. ಅಂದಿನ ಪ್ರಧಾನಿ ಮನಮೋಹನ್ ಸಿಂಗ್ 1500 ಕೋಟಿ ರೂ ಬಿಡುಗಡೆ ಮಾಡಿದ್ದರು. ಆಗ ರಾಜ್ಯ ಸರಕಾರ ಎಷ್ಟು ಹಣ ಖರ್ಚು ಮಾಡಿದೆ ಎಂದು ಮನಮೋಹನ ಸಿಂಗ್ ಅವರು ಕೇಳಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಎಸ್‌ವೈ ಹಾಗೂ ಶೋಭಾ ಕರಂದ್ಲಾಜೆಗೆ ಟಾಂಗ್ ನೀಡಿದರು.