ಸರಕಾರದ ವಿರುದ್ಧ ಸಮರ ಸಾರಿದರೆ ಕಾನೂನು ಕ್ರಮ: ಶೆಣೈಗೆ ಸಿಎಂ ವಾರ್ನಿಂಗ್

ಬುಧವಾರ, 8 ಜೂನ್ 2016 (12:13 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಸರಕಾರದ ವಿರುದ್ಧ ಸಮರ ಸಾರಿದರೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ರಾಜೀನಾಮೆ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಅನುಪಮಾ ಶೆಣೈ ಅವರು ಇನ್ನೂ ಡಿವೈಎಸ್‌ಪಿ ಹುದ್ದೆಯಲ್ಲಿದ್ದಾರೆ. ಅವರು ಈ ಹುದ್ದೆಯಲ್ಲಿ ಮುಂದುವರೆಯಲಿ ಎಂದು ನಮ್ಮ ಸರಕಾರ ಆಶಿಸುತ್ತದೆ ಎಂದು ಹೇಳಿದ್ದಾರೆ.
 
ಸರಕಾರಿ ಕೆಲಸದಲ್ಲಿರುವವರು ಸರಕಾರಕ್ಕೆ ವಿಧೇಯರಾಗಿರಬೇಕು. ಅನುಪಮಾ ಶೆಣೈ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬ್ರಹನ್ನೆಳೆಯರು ರಮ್ ರಾಜ್ಯ ಎಂದು ಪೋಸ್ಟ್‌ಗಳನ್ನು ಹಾಕಿ ಸರಕಾರದ ವಿರುದ್ಧ ಸಮರ ಸಾರಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ