ಬೆಂಗಳೂರು ರಸ್ತೆಗಳ ಅವ್ಯವಸ್ಥೆ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬುಧವಾರ, 18 ಮೇ 2016 (18:34 IST)
ಬೆಂಗಳೂರು ರಸ್ತೆಗಳ ಅವ್ಯವಸ್ಥೆ ಕಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ನಿವಾಸ ಕಾವೇರಿಯಲ್ಲಿ ತುರ್ತು ಸಭೆ ಕರೆದಿದ್ದು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಮುಂಜಾನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಸ್‌ಡಿಎಮ್ ಆಯುರ್ವೇದಿಕ್ ಆಸ್ಪತ್ರೆ ಉದ್ಘಾಟನೆಗೆ ತೆರಳಿದ್ದು, ಮೈಸೂರು ರಸ್ತೆ ಮಾರ್ಗವಾಗಿ ವಾಪಸ್ ಆಗುವ ಸಂದರ್ಭದಲ್ಲಿ ಆ ರಸ್ತೆಯ ಪರಿಸ್ಥಿತಿಯನ್ನು ಕಂಡು ಅಧಿಕಾರಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ. ಬಿಬಿಎಮ್‌ಪಿ ಕಾರ್ಯವೈಖರಿ ಕಂಡು ಗರಂ ಆದ ಸಿಎಂ, ಪೋನ್‌ ಮೂಲಕವೇ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಸಭೆಯಲ್ಲಿ ಭಾಗಿಯಾಗಿದ್ದ ಸಚಿವ ಜಾರ್ಜ್ ಅವರನ್ನು ಸಹ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ, ಜಾರ್ಜ್ ಅವರೇ ನೀವೇನು ಮಾಡುತ್ತಿದ್ದೇರಿ, ಬೆಂಗಳೂರು ನಗರಾಭಿವೃದ್ಧಿಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಅನುದಾನದ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿ. ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ. ಅಧಿಕಾರಿಗಳು ಮಾಡುವ ತಪ್ಪಿನಿಂದ ಸಾರ್ವಜನಿಕರ ಸರಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಮಳೆ ಬರುವ ಮುನ್ನವೆ ರಸ್ತೆಯನ್ನು ಸರಿಪಡಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.  
 
ರಾಜ್ಯದಲ್ಲಿ ಮಳೆ ಎದುರಾಗುವ ಮುನ್ನ ಕಸ ವೀಲೆವಾರಿಯಾಗಬೇಕು, ಮಳೆ ನೀರು ಸರಾಗವಾಗಿ ಹರಿದುಹೋಗುವ ವ್ಯವಸ್ಥೆ ಮಾಡಬೇಕು. ಮಳೆಗಾಲದಲ್ಲಿ ಒಂದೇ ಒಂದು ಕಂಪ್ಲೇಟ್ ಸಹ ಬರಬಾರದು ಎಂದು ಬಿಬಿಎಮ್‌ಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ರಸ್ತೆ ಗುಣಮಟ್ಟ ಸರಿಯಿಲ್ಲದಿದ್ದರೆ ಇಂಜಿನಿಯರ್‌ಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ