ಅನಾವೃಷ್ಟಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಿ: ಸಿಎಂ ಆದೇಶ

ಮಂಗಳವಾರ, 18 ಅಕ್ಟೋಬರ್ 2016 (18:14 IST)
ರೈತರಿಗಾಗಿ ರೂಪಿಸಿರುವ ಯೋಜನೆಗಳು ಅವರಿಗೆ ಪ್ರಾಮಾಣಿಕವಾಗಿ ತಲುಪಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಅನಾವೃಷ್ಟಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
 
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತೋಟಗಾರಿಕೆ, ಕೃಷಿ ಮಾರುಕಟ್ಟೆ, ಪಶುಸಂಗೋಪನೆ ಹಾಗೂ ರೇಷ್ಮೆ ಮತ್ತು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 
 
ಮೊದಲು ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿದ ಮುಖ್ಯಮಂತ್ರಿ, ಬಜೆಟ್‌ನಲ್ಲಿ ಪ್ರಸ್ತಾಪಿಸಿದ ವಿವಿಧ ಯೋಜನೆ ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು. 
 
ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಶುಸಂಗೋಪನಾ ಸಚಿವ ಎ.ಮಂಜು, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸೇರಿದಂತೆ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ