ತಮಿಳುನಾಡು ಸಿಎಂಗೆ ಪತ್ರ ಬರೆದ ಕರ್ನಾಟಕ ಸಿಎಂ

ಸೋಮವಾರ, 12 ಸೆಪ್ಟಂಬರ್ 2016 (17:16 IST)
ಕಾವೇರಿ ವಿಚಾರವಾಗಿ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಪತ್ರ ಬರೆದಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದ್ದು, ಕನ್ನಡಿಗರ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗುತ್ತಿದೆ. ಘಟನೆಯಲ್ಲಿ ಕನ್ನಡಿಗರ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
 
ಕರ್ನಾಟಕದಲ್ಲಿರುವ ತಮಿಳಿಗರ ರಕ್ಷಣೆಗೆ ರಾಜ್ಯ ಸರಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ನಡೆದ ಘಟನೆಯಿಂದ ರಾಜ್ಯದಲ್ಲಿ ಶಾಂತಿ ಕದಡುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ