ಮಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದೇನೆ.ಅದು ತಪ್ಪಾ? ಎಂದ ಅವರು, ಕಾಂಗ್ರೆಸ್ ಹೈಕಮಾಂಡ್ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ. ಮೊದಲಿನಿಂದಲೂ ನಾವು ಕಾಂಗ್ರೆಸ್ ಪಕ್ಷದ ಸೇವೆವಲ್ಲಿ ತೊಡಿಗಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದರು.