ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ
ಈ ಸಂದರ್ಭದಲ್ಲಿ ಹಲವು ಯೋಜನೆಗಳ ಘೋಷಣೆಯಾಗುವ ಸಾಧ್ಯತೆಯಿದೆ. 33 ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ಹೊತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮೈದಾನದ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸಚಿವರು ಸುದ್ದಿಗಾರರಿಗೆ ಇಂದಿನ ಕಾರ್ಯಕ್ರಮದ ವಿವರಣೆ ನೀಡಿದರು.