ಗಲಭೆ ಪೀಡಿತ ಪ್ರದೇಶಗಳಿಗೆ ಸಿಎಂ ರೌಂಡ್ಸ್

ಮಂಗಳವಾರ, 13 ಸೆಪ್ಟಂಬರ್ 2016 (12:24 IST)
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ಬಳಿಕ ಗಲಭೆ ಪೀಡಿತ ಪ್ರದೇಶಗಳಿಗೆ ಪರಿಶೀಲನೆಗೆ ಹೋಗಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವರು ಸಹ ಅವರಿಗೆ ಸಾಥ್ ನೀಡಲಿದ್ದಾರೆ.
 
ರಾಜ್ಯದಲ್ಲಿ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲು ತುರ್ತು ಸಭೆಯನ್ನು ಕರೆಯಲಾಗಿದ್ದು, ಸಭೆ ಮುಗಿದ ಬಳಿಕ ಸಿಎಂ ಗಲಭೆ ಪೀಡಿತ ಪ್ರದೇಶಗಳಿಗೆ ರೌಂಡ್ಸ್ ಹೋಗಲಿದ್ದಾರೆ. 
 
ನಿನ್ನೆ ನಗರದ ಮೈಸೂರು ರಸ್ತೆ, ಮಾಗಡಿ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಲಭೆ ನಡೆದಿತ್ತು. 
 
ಕಾವೇರಿ ವಿಚಾರ, ಪ್ರಸ್ತುತ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಚಿಂತಿಸಿ ರಾಜಕೀಯ ನಿರ್ಧಾರ ಕೈಗೊಳ್ಳಿ, ಆತುರದ ನಿರ್ಧಾರ ಬೇಡ ಎಂದು ಇಂದು ಮುಂಜಾನೆ ನಡೆದ ಸಿಎಂ ನಿವಾಸ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ