ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಸಿಎಂ ಟಾಂಗ್
ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಹೋಗಿದ್ದರು ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೆಲ್ಲ ಅಪ್ರಸ್ತುತ. ನಾನು ಎಲ್ಲಿಯೂ ಹೋಗಿರಲಿಲ್ಲ, ನನ್ನ ಮನೆಯಲ್ಲಿಯೇ ಕೂತಿದ್ದೆ ಎಂದು ಹೇಳಿದ್ದಾರೆ..ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಲಕ್ಷ್ಮಣ ಸವದಿ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಅವರಿಗೆ ಮುಂದೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಬಿಜೆಪಿಗೆ ರಾಜೀನಾಮೆ ನಿರ್ಧಾರ ಹಿಂಪಡೆಯಬೇಕು ಎಂದರು....ಇದೇ ವೇಳೆ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂದಾಗಿದ್ದರು, ಆಗ ನಾನು ಹಾಗೂ ಸಿಸಿ ಪಾಟೀಲ್ ಅವರೇ ಅವರನ್ನು ಬಿಜೆಪಿಗೆ ಸೇರಿಸಿದ್ದು ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ, ನಾನು ಯಾವ ಪಕ್ಷಕ್ಕೂ ಹೋಗಿರಲಿಲ್ಲ. ಮನೆಯಲ್ಲಿಯೇ ಕೂತಿದ್ದೆ. ಆಗ ಮಾಜಿ ಸಿಎಂ ಯಡಿಯೂರಪ್ಪ, ದಿ.ಮಾಜಿ ಸಂಸದ ಅನಂತ ಕುಮಾರ್ ನಮ್ಮ ಮನೆಗೆ ಬಂದಿದ್ದರು. ಸಿಸಿ ಪಾಟೀಲ್, ಲಕ್ಷ್ಮಣ ಸವದಿ ಬಂದಿದ್ದೂ ನಿಜ. ಆದರೆ ಕಾಂಗ್ರೆಸ್ ಗೆ ನಾನು ಹೋಗುತ್ತಿರಲಿಲ್ಲ ಎಂದ್ರು