ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Sampriya

ಭಾನುವಾರ, 20 ಏಪ್ರಿಲ್ 2025 (18:04 IST)
Photo Credit X
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅದಲ್ಲದೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿಸಿಎಂ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಗೆ ಹುಂಡಿಗೆ ಕಾಣಿಕೆಯನ್ನೂ ಅರ್ಪಿಸಿದ್ದಾರೆ.

ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಟೋ ಹಂಚಿ ಬರೆದುಕೊಂಡಿದ್ದಾರೆ.

ಧರ್ಮಸ್ಥಳೇಶ ಸಕಲೇಶಾ ದಯಾಪಯೋಧೇ
ಶ್ರೀ ಮಂಜುನಾಥ ನಿತರಾಂ ಕುರು ಮಂಗಳಂ ಮೇ

ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥನಾದೆ‌. ನಾಡಿನ ಸಮಸ್ತ ಜನರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದೆ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ