ನಾಳೆ ಚಾಮರಾಜನಗರಕ್ಕೆ ಸಿಎಂ ಭೇಟಿ

ಬುಧವಾರ, 6 ಅಕ್ಟೋಬರ್ 2021 (13:47 IST)
ಬೆಂಗಳೂರು,ಅ.6 :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌಢ್ಯಕ್ಕೆ ತಿಲಾಂಜಲಿ ಹಾಡಿ ಗಡಿಜಿಲ್ಲೆ ಚಾಮರಾಜನಗರಕ್ಕೆ ನಾಳೆ ಭೇಟಿ ನೀಡುತ್ತಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗಲಿದೆ ಎಂಬ ಮೂಢನಂಬಿಕೆಯನ್ನು ಬದಿಗೊತ್ತಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಿಎಂ ಆಗಮಿಸುತ್ತಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಯಲ್ಲಿ ಚಾಮರಾಜನಗರಕ್ಕೆ ಒಂದೇ ಬಾರಿಯೂ ಭೇಟಿ ನೀಡಿರಲಿಲ್ಲ. ಇಲ್ಲಿಗೆ ಭೇಟಿ ನೀಡಿದವರು ಅಕಾರ ಕಳೆದುಕೊಳ್ಳುತ್ತಾರೆ ಎಂಬ ಭೀತಿಯಲ್ಲಿ ಅವರು ಕೂಡ ಮೌಢ್ಯಕ್ಕೆ ಶರಣಾಗಿದ್ದರು.
ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಬಸವರಾಜ ಬೊಮ್ಮಾಯಿ ಅವರು, ಮೂಢನಂಬಿಕೆ ಹಾಗೂ ಮೌಢ್ಯವನ್ನು ನಂಬುವುದಿಲ್ಲ. ಎಲ್ಲ ಅಡೆತಡೆಗಳನ್ನು ಮೆಟ್ಟಿ ಅವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ