ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ

ಶನಿವಾರ, 1 ಜನವರಿ 2022 (15:09 IST)
ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಚಿವಾರದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಹಾಲಪ್ಪ ಆಚಾರ್, ಅಂಗಾರ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿ ಕು ಮಾರ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ