ಸಿಎಂ ಒಂದೇ ಭೇಟಿಯಿಂದ ಇಡೀ ಜಿಲ್ಲೆಗೆ ನೀರು?

ಬುಧವಾರ, 26 ಜೂನ್ 2019 (15:20 IST)
ಜಲಧಾರೆ ಯೋಜನೆಯ ಮೂಲಕ ಸಮಗ್ರ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದನ್ನು ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಜನತಾದರ್ಶನ, ಗ್ರಾಮವಾಸ್ತವ್ಯ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ರೈಲಿನ ಮೂಲಕ ಬೆಂಗಳೂರಿನಿಂದ ಆಗಮಿಸಿ ರಾಯಚೂರು ಅತಿಥಿಗೃಹದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬರಗಾಲಕ್ಕೆ ಸಂಬಂಧಿಸಿದಂತೆ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ, ಎಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಡಿಸಿ ಶರತ್ ಹಾಗೂ ಜಿಪಂ ಸಿಇಒ ನಳಿನಿ ಅತುಲ್ ಅವರಿಗೆ ಖಡಕ್ ಆಗಿ ಸೂಚನೆ ನೀಡಿದರು.
ಬರಗಾಲದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಹಣಕಾಸಿನ ಕೊರತೆ ಇಲ್ಲ ಎಂದು ಡಿಸಿ ಶರತ್ ಅವರು ಸಿಎಂ ಅವರಿಗೆ ತಿಳಿಸಿದರು.

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಎಚ್ ಕೆಆರ್ಡಿಬಿ, ಬಿಸಿಎಂ ಇಲಾಖೆಗಳಿಗೆ ಸಂಬಂಧಿಸಿದ 8144.99 ಲಕ್ಷ ರೂ.ಗಳ 38ಕಾಮಗಾರಿಗಳು ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗಲಿವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ