ಬಿಬಿಎಂಪಿ ವ್ಯಾಪ್ತಿಯಲ್ಲಿ `ನಮ್ಮ ಕ್ಲಿನಿಕ್’ಗಳಿಗೆ ಫೆ.7 ರಂದು ಸಿಎಂ ಚಾಲನೆ : ಸುಧಾಕರ್

ಮಂಗಳವಾರ, 7 ಫೆಬ್ರವರಿ 2023 (11:25 IST)
ಬೆಂಗಳೂರು : ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 `ನಮ್ಮ ಕ್ಲಿನಿಕ್’ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಫೆ.7ರಂದು ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್ನ ಆರಂಭಿಸಿರುವ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಲಾಗುತ್ತಿದ್ದು, ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವ 107 ಕ್ಲಿನಿಕ್ಗಳಿಗೂ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

ಕಳೆದ ವರ್ಷ ಡಿಸೆಂಬರ್ 14ರಂದು ಬೊಮ್ಮಾಯಿ ಅವರು ಧಾರವಾಡದ ಬೈರದೇವರಕೊಪ್ಪದಲ್ಲಿ `ನಮ್ಮ ಕ್ಲಿನಿಕ್’ ಉದ್ಘಾಟಿಸುವ ಮೂಲಕ ರಾಜ್ಯಾದ್ಯಂತ ಏಕಕಾಲಕ್ಕೆ 100 ನಮ್ಮ ಕ್ಲಿನಿಕ್ಗಳಿಗೆ ಚಾಲನೆ ನೀಡಿದ್ದರು.

ನಮ್ಮ ಕ್ಲಿನಿಕ್ ಸೇವೆಯ ಬಗ್ಗೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದಾಗ, ಸಾರ್ವಜನಿಕರು ಬಹಳ ಸಂತೋಷದಿಂದ ಕೃತಜ್ಞತೆ ಸಲ್ಲಿಸಿದ್ದರು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ