ಆರ್ ಆರ್ ಆರ್ ಸಿನಿಮಾ ತಂಡಕ್ಕೆ ಶುಭಾಶಯ ಕೋರಿದ ಸಿಎಂ
ಈವರೆಗೂ ಆಸ್ಕರ್ ರೇಸ್ನಲ್ಲಿ ಸ್ಪರ್ಧಿಸುವುದೇ ಕಷ್ಟವಾಗಿದ್ದ ಭಾರತಕ್ಕೆ, ಈ ಬಾರಿ ಎರಡು ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, . ಆರ್ಆರ್ಆರ್ ಸಿನಿಮಾದ ನಾಟು ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಈ ಸಾಧನೆ ಮಾಡಿದ ಸಂಪೂರ್ಣ ತಂಡಕ್ಕೆ ಶುಭಾಶಯ ಎಂದು ಟ್ವೀಟ್ ಮಾಡಿದ್ದಾರೆ.ಗುನೀತ್ ಮೊಂಗಾ ಅವರ ದಿ ಎಲಿಫೆಂಟ್ ವಿಸ್ಪರರ್ಸ್ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಈ ಚಿತ್ರವು ಆನೆಗಳ ನಡುವಿನ ಅವಿನಾಭಾವ ಸಂಬಂಧವನ್ನು ಹೇಳುತ್ತದೆ. ಗುನೀತ್ ಮೊಂಗಾ ಮತ್ತು ತಂಡಕ್ಕೆ ಅಭಿನಂದನೆಗಳು ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.