ಭಾರೀ ಕುತೂಹಲಕ್ಕೆ ಕಾರಣವಾಗಿದೆ ಸಿಎಂ ಯಡಿಯೂರಪ್ಪ -ಬಿ.ಎಲ್. ಸಂತೋಷ ಭೇಟಿ

ಸೋಮವಾರ, 16 ಡಿಸೆಂಬರ್ 2019 (10:56 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.



ಇಂದು ಬೆಳಿಗ್ಗೆ ಧವಳಗಿರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾದ ಬಿ.ಎಲ್. ಸಂತೋಷ ಅವರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಉಪಚುನಾವಣೆಯ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ನಡೆದ ಇವರ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.


ಸಚಿವ ಸಂಪುಟ ವಿಸ್ತರಣೆ ಹೊಸ್ತಿಲಲ್ಲೇ ಬಿಎಸ್ ವೈ-ಸಂತೋಷ್ ಅವರ ಭೇಟಿಯಾಗಿದ್ದು,  ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಿರೋ ‍ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ