'ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ'

ಗುರುವಾರ, 17 ಅಕ್ಟೋಬರ್ 2019 (16:07 IST)
ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನು ಬದಲಾವಣೆ ಮಾಡಲಾಗುತ್ತದೆ ಅನ್ನೋ ವಿಷಯ
ಮತ್ತೆ ಮುನ್ನೆಲೆ ಚರ್ಚೆಗೆ ಬಂದಿದೆ.

ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಬರ್ತಿರೋ ಸುದ್ದಿ ಯಾವುದೂ ನಿಜವಲ್ಲ. ಕೇವಲ ಊಹಾಪೋಹ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ ಸ್ಪಷ್ಟಪಡಿಸಿದ್ದಾರೆ.

 ಡಿಸೆಂಬರ್ ವೇಳೆಗೆ ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುವುದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅವರು  ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೀತ್ ಶಾ ಮಾಡಲ್ ಹೇಗಿದೆಯೋ ಹಾಗೆಯೇ ರಾಜ್ಯದಲ್ಲಿ ಕಟೀಲ್ ಮತ್ತು ಮತ್ತು ಬಿಎಸ್ ವೈ ಮಾಡಲ್ ಆಗಿದ್ದಾರೆ. ಅವರ ಕ್ಯಾಪ್ಟನ್ ಶಿಪ್ ನಂತೆಯೇ ನಾವೆಲ್ಲರೂ ಕಾರ್ಯ ನಿರ್ವಹಿಸಲಿದ್ದೇವೆ ಅಂತ ಹೇಳಿದ್ರು.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶೋಕಾಸ್ ನೋಟೀಸ್ ಗೆ ಉತ್ತರ ನೀಡಬೇಕು. ಉತ್ತರ ನೀಡದಿದ್ದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಇನ್ನು ಅವರು ನೋಟಿಸ್ ಗೆ ಉತ್ತರ ನೀಡುತ್ತಾರೆ ಎಂಬ ನಿರೀಕ್ಷೆ ಇದೆ. ಒಂದು ವೇಳೆ ಉತ್ತರಿಸದಿದ್ದಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚಿಂತನೆ ನಡೆಸಲಿದ್ದಾರೆ ಎಂದು ಹೇಳಿದ್ರು.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ