ಮತ್ತೊಂದು ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
 
ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ ಕೊಡಲು ಸಿದ್ಧರಾಗಿದ್ದಾರೆ.
									
				ವಿಜಯಪುರ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ಮಾಡಿ ಮಾತನಾಡಿ,  ವಿಶ್ವಪರಂಪರೆ ತಾಣ, ಶೈಕ್ಷಣಿಕ, ತೋಟಗಾರಿಕೆ ಹಾಗೂ  ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಹೊಂದಿರುವ ಈ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿಸುವುದು   ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ನಮ್ಮೆಲ್ಲರ ಆಶಯವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದಿದ್ದಾರೆ.