ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ನೀಡಿದ್ದಾರೆ ಸಿಹಿಸುದ್ದಿ

ಶನಿವಾರ, 21 ಸೆಪ್ಟಂಬರ್ 2019 (10:12 IST)
ಬೆಂಗಳೂರು : ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಶಾಸಕರನ್ನು ಓಲೈಸಲು ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಸಿಹಿಸುದ್ದಿ ನೀಡಿದ್ದಾರೆ.




ಸಿಎಂ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಶಾಸಕರಲ್ಲಿ 6 ಶಾಸಕರಿಗೆ ವಿಧಾನಸಭೆಯ ವಿವಿಧ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ.


ಹಿರಿಯೂರು ಶಾಸಕಿ ಪೂರ್ಣಿಮಾ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ , ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್- ಗ್ರಂಥಾಲಯ ಸಮಿತಿ ಅಧ್ಯಕ್ಷ, ದಾವಣಗೆರೆ ಉತ್ತರ ಶಾಸಕ ಎಸ್.ಎ. ರವೀಂದ್ರನಾಥ್- ಹಕ್ಕುಬಾಧ್ಯತಾ ಸಮಿತಿ ಅಧ್ಯಕ್ಷ, ಸುಳ್ಯ ಶಾಸಕ ಎಸ್. ಅಂಗಾರ - ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಅಧ್ಯಕ್ಷ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ- ಪಂಚಾಯತ್ ರಾಜ್ ಸಂಸ್ಥೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ