ಮಹಾರಾಷ್ಟ್ರ ಸಿಎಂ ನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ

ಭಾನುವಾರ, 1 ಸೆಪ್ಟಂಬರ್ 2019 (11:06 IST)
ಬೆಂಗಳೂರು : ಸಿಎಂ ಬಿ.ಎಸ್​.ಯಡಿಯೂರಪ್ಪ ಸೆಪ್ಟೆಂಬರ್ 3ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಕೊಯ್ನಾ ಜಲಾಶಯದಿಂದ ಹೆಚ್ಚಾಗಿ ನೀರು ಬಿಡುಗಡೆ ಮಾಡಿದ ಹಿನ್ನೆಲೆ, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದೆ. ಹಲವು ತಾಲೂಕುಗಳು ಕೂಡ ಮುಳುಗಡೆ ಆಗಿವೆ. ಹೀಗಾಗಿ ಇದಕ್ಕೆ ಸೂಕ್ತ ಪರಿಹಾರ ಕೊಡಿಸುವ ಕೆಲಸ ಮಾಡಬೇಕು ಎಂದು ಬಿಎಸ್​ವೈ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.


ಅಲ್ಲದೇ ಉತ್ತರ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಯಾದ ಮಹದಾಯಿ ನದಿ ಕುರಿತು ಫಡ್ನವಿಸ್​ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ ಮಂಗಳವಾರ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ