ಲಸಿಕೆಗೆ ಕೇಂದ್ರಕ್ಕೆ ಮೊರೆಯಿಟ್ಟ ಸಿಎಂ ಬಿಎಸ್ ವೈ

ಶನಿವಾರ, 17 ಜುಲೈ 2021 (09:10 IST)
ನವದೆಹಲಿ: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ 1.5 ಕೋಟಿ ಲಸಿಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಮೊರೆಯಿಟ್ಟಿದ್ದಾರೆ.


ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ಸಿಎಂ ಈ ಬೇಡಿಕೆ ಮುಂದಿಟ್ಟಿದ್ದಾರೆ. ನಿನ್ನೆ ಕೊವಿಡ್ ಕುರಿತು ಚರ್ಚಿಸಲು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದರು.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗಿದ್ದರೂ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ನೀಡುವುದು ಅನಿವಾರ್ಯ. ಆದರೆ ಪ್ರಸ್ತುತ ಲಸಿಕೆ ಕೊರತೆಯಿಂದ ಹಲವು ಕೇಂದ್ರಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿದೆ. ಹೀಗಾಗಿ ಲಸಿಕೆ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಸಿಎಂ ಯಡಿಯೂರಪ್ಪ ರಾಜ್ಯದ ಕೊವಿಡ್‍ ಸ್ಥಿತಿ ಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ