ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

ಬುಧವಾರ, 6 ಸೆಪ್ಟಂಬರ್ 2023 (18:12 IST)
ಅಯೋಧ್ಯಾ ರಾಮಮಂದಿರ  ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಮುಂದಿನ ಜನವರಿಯಲ್ಲಿ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟಿಸಲಿದ್ದಾರೆ. ಅಂತಿಮ ಹಂತದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಇದ್ದು, ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ರಾಮಜನ್ಮಭೂಮಿಯಲ್ಲಿ ಭರದಿಂದ ದೇಗುಲ ನಿರ್ಮಾಣ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗಲಿದ್ದು, ಜ. 14ರಿಂದ ಅಯೋಧ್ಯೆ ಮಂದಿರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುವುದು. ಜ.14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.ಆದ್ರಿಂದ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ. ಹಾಗಾಗಿ ದೆಹಲಿಯಲ್ಲಿ ಮೋದಿಯನ್ನು ಯೋಗಿ ಆದಿತ್ಯನಾಥ್ ಇಂದು ಸಂಜೆ ಭೇಟಿಯಾಗಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ