ಸಮ್ಮಿಶ್ರ ಸರಕಾರ: ಕರುಣಾಕರ ರೆಡ್ಡಿ ಹೇಳಿದ ಭವಿಷ್ಯ ಗೊತ್ತಾ?

ಶುಕ್ರವಾರ, 29 ಜೂನ್ 2018 (16:07 IST)
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ದಿನದಂದು ಗೊಂದಲವಂತೂ ಇದ್ದೇ ಇದೆ. ಈ ಸಮ್ಮಿಶ್ರ ಸರಕಾರ ಪೂರ್ಣಾವಧಿ ಆಡಳಿತ ನಡೆಸುತ್ತದೆ ಎನ್ನುವುದು ಜನರಿಗೆ ನಂಬಿಕೆ ಇಲ್ಲ. ಹೀಗಂತ ಮಾಜಿ ಸಚಿವ ಕರುಣಾಕರ ರೆಡ್ಡಿ ಹೇಳಿಕೆ ನೀಡಿದ್ದಾರೆ. 
 
ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಯಾವ ವೇಳೆಯಲ್ಲಿಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಹುದು. ಬಿಜೆಪಿಗೂ ಹೈಕಮಾಂಡ್ ಇದೆ. ನಮ್ಮವರು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೋಡಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 
 
ಆಪರೇಷನ್ ಕಮಲದ ಪ್ರಶ್ನೆ ಬರುವುದಿಲ್ಲ ಎಂದಿರುವ ಅವರು, ಬಜೆಟ್ ಮಂಡನೆ ಮಾಡುವ ಅವಶ್ಯಕತೆ ಇಲ್ಲವೇ ಇಲ್ಲ ಎಂದು ಕಾಂಗ್ರೆಸ್ ನವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಜೆಡಿಎಸ್ ಪಟ್ಟು ಹಿಡಿದಿದೆ. ಹೀಗಾಗಿ ಈ ಸರಕಾರ ಎಲ್ಲಿಯವರೆಗೆ ನಡೆಯುತ್ತದೆ ಎಂದು ಕಾದು ನೋಡಬೇಕೆಂದರು. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ