ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮಕ್ಕೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಚಾಮರಾಜನಗರದಲ್ಲಿ ಸಹಸ್ರಾರು ಮಂದಿ ಸಂವಿಧಾನ ಪೀಠಿಕೆಯನ್ನ ಓದಿದ್ದಾರೆ.. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸರ್ಕಾರಿ ನೌಕರರು ಭಾಗಿಯಾಗಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದರು. ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಡಿಸಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಹಲವರು ಭಾಗಿಯಾಗಿದ್ದರು.