ಕಾಲೇಜು ವಿದ್ಯಾರ್ಥಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರು-ಕಾಲೇಜು ವಿದ್ಯಾರ್ಥಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನಿನ್ನೆ ಸಂಜೆ ತಡವಾಗಿ ಹೊಸರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜ್ ವಿದ್ಯಾರ್ಥಿ ನವಿಘ್ನೇಶ್ ಕೆ (19) ಆತ್ಮಹತ್ಯೆಗೆ ಶರಣಾಗಿದ್ದಾನೆ.ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ .ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.