ರಂಗೇರಿದ ಚುನಾವಣಾ ಅಖಾಡ: 14 ರಂದು ಬೆಂಗಳೂರಿನಲ್ಲಿ ಮೋದಿ ರೋಡ್ ಶೋ
ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದಾರೆ. ಆ ಬಳಿಕ ಅವರು ರಾಮನಗರ ಅಥವಾ ಚನ್ನಪಟ್ಟಣದಲ್ಲಿ ಈ ಎರಡರಲ್ಲಿ ಒಂದು ಕಡೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ಅಂದು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.