ನಿಮ್ಮ ಮನೆಗೆ ಬಂದು ಕೊರೊನಾ ವೈರಸ್ ಚೆಕ್ ಮಾಡ್ತಾರೆ

ಶನಿವಾರ, 28 ಮಾರ್ಚ್ 2020 (20:57 IST)
ಕೊರೊನಾ ವೈರಸ್ ಹರಡುವಿಕೆ ತಡೆ ನಿಟ್ಟಿನಲ್ಲಿ  ಮುಂಜಾಗೃತಾ ಕ್ರಮವಾಗಿ ಈ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ  ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಪ್ರತಿ ಮನೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಮತ್ತು ಇತರೆ ಅನಾರೋಗ್ಯಕ್ಕೆ ಒಳಗಾಗಿರುವವರು, ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿ ಕಲೆಹಾಕಲಾಗುತ್ತದೆ.

ಈ ಕ್ರಮದಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯ ಪ್ರಮಾಣವನ್ನು  ನಿಖರವಾಗಿ ಅರಿಯಲು   ಸಾಧ್ಯವಾಗುತ್ತದೆ.
ಜ್ವರದಿಂದ ಬಳಲುತ್ತಿರುವವರಿಗೆ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. 

ವಿದೇಶದಿಂದ, ಹೊರ ರಾಜ್ಯದಿಂದ ಮತ್ತು ಹೊರ ಜಿಲ್ಲೆಯಿಂದ ಬಂದವರನ್ನು ಪ್ರತಿದಿನ ಸ್ಕ್ರೀನಿಂಗ್  ಗೆ ಒಳಪಡಿಸಲಾಗುತ್ತದೆ ಎಂದು ಡಿಸಿ ಡಾ. ಹರೀಶಕುಮಾರ ಕೆ. ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ