ಎಲ್ಲೂ ಹೋಗಬೇಡಿ : ನಿಮ್ಮನೆಗೆ ಬರುತ್ತೆ ಹಣ
ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳಡಿಯ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರವಾಗಿ ಅವರ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಲ್ಲಿ ಜಮೆಯಾಗಿರುವ ತಮ್ಮ ಮಾಸಿಕ ಪಿಂಚಣಿಯನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್‌ರವರು ತಮ್ಮ ಮನೆಯ ಬಾಗಿಲಿಗೆ ಬಂದು ತಲುಪಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.