ಫೆಬ್ರವರಿ 5 ರಿಂದ ನಡೆಯುವ ಮೂರು ದಿನಗಳ ನುಡಿ ಸಮ್ಮೇಳದಲ್ಲಿ ಭಾಗವಹಿಸಲು ಸಮ್ಮೇಳನಾಧ್ಯಕ್ಷ ಕಲಬುರಗಿಗೆ ಬಂದಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ .ಎಚ್.ಎಸ್ ವೆಂಕಟೇಶಮೂರ್ತಿ ಅವರು ಬೆಂಗಳೂರಿನಿಂದ ಉದ್ಯಾನ್ ಎಕ್ಸಪ್ರೆಸ್ ರೈಲಿನ ಮೂಲಕ ಕಲಬುರ್ಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ರು.
ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದ್ರು.
ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದ ಅಧ್ಯಕ್ಷರಾಗಿರುವುದು ನನ್ನ ಭಾಗ್ಯ. ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲು ಬಂದ ನನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ.
ಕಲಬುರಗಿ ಜನರ ಪ್ರೀತಿಗೆ ನಾನು ತಲೆಬಾಗುವೆ. ಅತ್ಯಂತ ಖುಷಿಯಿಂದ ಸಮ್ಮೇಳನದಲ್ಲಿ ಭಾಗಿಯಾಗುವೆ. 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಳೆಯಿಂದ ಮೂರು ದಿನಗಳ ಕಾಲ ಗುಲಬರ್ಗಾ ವಿ.ವಿ. ಆವರಣದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಮಹಿಳೆಯರು, ಮಕ್ಕಳು ಎಲ್ಲರನ್ನೂ ಕರೆತಂದು ಮಕ್ಕಳಲ್ಲಿ ಕನ್ನಡ ಪ್ರೇಮ ಹುಟ್ಟಿಸುವ ಕೆಲಸ ಮಾಡಬೇಕೆಂದು ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ ಹೇಳಿದ್ದಾರೆ.