ಅ.31 ರಂದು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ

ಮಂಗಳವಾರ, 26 ಅಕ್ಟೋಬರ್ 2021 (19:59 IST)
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ  ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.  
     ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಮಂಡೇಪಂಡ ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವಿರಾಜಪೇಟೆ ಶಾಸಕರಾದ ಕೊಂಬಾರನ ಜಿ.ಬೋಪಯ್ಯ, ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಕೊಡಗು ವಿಭಾಗದ ಅಂಚೆ ಇಲಾಖೆಯ ಅಧೀಕ್ಷಕರಾದ ಎಚ್.ಜೆ.ಸೋಮಯ್ಯ, ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ