ಕರ್ತವ್ಯನಿರತ ಪೊಲೀಸರ ಜೊತೆಯೇ ವರ್ಷಾಚರಣೆ ಮಾಡಿದ ಕಮಿಷನರ್

ಶನಿವಾರ, 1 ಜನವರಿ 2022 (16:36 IST)
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಜೊತೆ ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೊಸ ವರ್ಷ ಆಚರಣೆ ಮಾಡಿದ್ದಾರೆ. ನೈಟ್ ಕರ್ಫ್ಯೂ ಹಿನ್ನೆಲೆ ಸಿಲಿಕಾನ್ ಸಿಟಿ ಸುತ್ತ ಪೊಲೀಸರು ಹದ್ದಿನ ಕಣ್ಣಿಟ್ಟು ಕೆಲಸ ನಿರ್ವಹಿಸಿದ್ದಾರೆ. ಅದರಂತೆ ಲಾಲ್ ಬಾಗ್ ಸೌತ್ ಗೇಟ್ ಬಳಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರ ಜೊತೆ ಕಮಲ್ ಪಂಥ್ ಅವರು ಕೇಕ್ ಕತ್ತರಿಸಿ ಹೊಸವರ್ಷವನ್ನು ಸಂಭ್ರಮಿಸಿದ್ದಾರೆ.
ಓಮಿಕ್ರಾನ್ ನಿಯಂತ್ರಣದ ಹಿನ್ನೆಲೆ ರಾತ್ರಿ ಕರ್ಫ್ಯೂ ವಿಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಹೀಗಾಗಿ ನಗರದ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ