ಜನರ ತೀರ್ಮಾನಕ್ಕೆ ಬದ್ಧ- ಜಗದೀಶ್ ಶೆಟ್ಟರ್

ಶನಿವಾರ, 13 ಮೇ 2023 (17:47 IST)
ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
 
ನಾನು ಸಿಂದಗಿ, ಮುದ್ದೇಬಿಹಾಳ, ಕೊಪ್ಪಳ, ಹಾವೇರಿ ಸೇರಿದಂತೆ ಹಲವು ಕಡೆ ಪ್ರವಾಸ ಮಾಡಿದ್ದೆ. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದರ ಪರಿಣಾಮವು ಮುಂಬಯಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ರಾಜ್ಯದ ಮೇಲಾಗಿದೆ ಎಂದರು.
 
ನನ್ನನ್ನು ಸೋಲಿಸಬೇಕೆಂದು ಹಲವರು ಪಣ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ‌ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ್ ಹೇಳಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ