ದೇವೇಗೌಡ, ಕುಮಾರಸ್ವಾಮಿ ತೀರ್ಮಾನಕ್ಕೆ ಬದ್ಧ: ಹೊರಟ್ಟಿ

ಗುರುವಾರ, 15 ಜೂನ್ 2017 (12:09 IST)
ಜೆಡಿಎಸ್ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.
 
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಹಿನ್ನೆಲೆಯಲ್ಲಿ ಬಹುಮತದ ಕೊರತೆ ಎದುರಾಗಿದ್ದರಿಂದ ಜೆಡಿಎಸ್ ಬೆಂಬಲ ಪಡೆಯಲು ನಿರ್ಧರಿಸಿದೆ. ಆದರೆ, ಹೊರಟ್ಟಿಯವರನ್ನು ಸಭಾಪತಿ ಮಾಡಿದಲ್ಲಿ ಮಾತ್ರ ಬೆಂಬಲ ನೀಡುವುದಾಗಿ ಸಹಕಾರ ನೀಡುವುದಾಗಿ ಷರತ್ತು ಒಡ್ಡಿದೆ ಎನ್ನಲಾಗುತ್ತಿದೆ.
 
ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿದಲ್ಲಿ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡಲು ಸಿದ್ದವಿದೆ ಪಕ್ಷದ ಅಭ್ಯರ್ಥಿ ಮುಖ್ಯವಲ್ಲ. ತತ್ವ ಸಿದ್ಧಾಂತ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.   
 
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಉದ್ದೇಶ ಒಂದೇ ಆಗಿರುವ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಬಹುತೇಕ ಸಭಾಪತಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ